30ನೀನು ಅನ್ಯಜನಾಂಗಗಳ ಹಿಂದೆ ಹೋಗಿ ವ್ಯಭಿಚರಿಸಿದ್ದರಿಂದಲೂ ಅವರ ವಿಗ್ರಹ ಗಳಿಂದ ನಿನ್ನನ್ನು ಅಪವಿತ್ರಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಾನು ನಿನಗೆ ಮಾಡುತ್ತೇನೆ.
31ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.
32ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು.
33ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ.
34ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವಿ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.