41ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.
42ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.
43ಆಮೇಲೆ ನಾನು ಅವಳಿಗೆ ಹೇಳಿದ್ದೇನಂದರೆ, ವ್ಯಭಿಚಾರದಿಂದ ಸವೆದು ಹೋದ ವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ?
44ಆದರೂ ವ್ಯಭಿಚಾರಿಣಿ ಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು.
45ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ.