45ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ.
46ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು.
47ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.
48ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.
49ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.