ಯೆಹೆಜೆಕೇಲ್ 26

ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.

Ezekiel 26:21 (UKJV) I will make you a terror, and you shall be no more: though you be sought for, yet shall you never be found again, says the Lord GOD.

19ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು.

20ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.

21ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.

Kannada Bible (Old Version), Bible Society of India.