ಯೆಹೆಜೆಕೇಲ್ 36

ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು.

Ezekiel 36:19 (UKJV) And I scattered them among the heathen, and they were dispersed through the countries: according to their way and according to their doings I judged them.

17ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.

18ಆದದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷ ವನ್ನು ಅವರ ಮೇಲೆ ಸುರಿಸಿದೆನು.

19ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು.

20ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.

21ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು.

Kannada Bible (Old Version), Bible Society of India.