ಯೆಹೆಜೆಕೇಲ್ 39

ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.

Ezekiel 39:22 (UKJV) So the house of Israel shall know that I am the LORD their God from that day and forward.

20ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.

21ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು.

22ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.

23ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು.

24ಅವರ ಅಶುದ್ಧತ್ವದ ಪ್ರಕಾರವೂ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ.

Kannada Bible (Old Version), Bible Society of India.