28ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು;
29ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ;
30ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು.
31ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು.
32ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು.