ಯೆಹೆಜೆಕೇಲ್ 45

ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು.

Ezekiel 45:24 (UKJV) And he shall prepare a food offering of an ephah for a bullock, and an ephah for a ram, and an hin of oil for an ephah.

22ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ಪಾಪಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.

23ಹಬ್ಬದ ಏಳು ದಿವಸಗಳಲ್ಲಿ ಪ್ರತಿ ದಿನವೂ ಅವನು ಕರ್ತನಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿ ದಿನವೂ ಪಾಪಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು;

24ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು.

25ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.

Kannada Bible (Old Version), Bible Society of India.