ಯೆಹೆಜೆಕೇಲ್ 47

ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.

Ezekiel 47:5 (UKJV) Afterward he measured a thousand; and it was a river that I could not pass over: for the waters were risen, waters to swim in, a river that could not be passed over.

3ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು.

4ಅವನು ಸಾವಿರ ಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು.

5ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.

6ಅವನು ನನಗೆ ಹೇಳಿದ್ದೇನಂದರೆ, ಮನುಷ್ಯಪುತ್ರನೇ; ನೀನು ಇದನ್ನು ನೋಡಿದೆಯಾ ಎಂದು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು.

7ನಾನು ತಿರಿಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆಕಡೆಯೂ ಈಕಡೆಯೂ ಅತಿ ಹೆಚ್ಚು ಮರಗಳಿದ್ದವು.

Kannada Bible (Old Version), Bible Society of India.