12ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
13ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
14ಇದಲ್ಲದೆ ನಾನು ಹಾದು ಹೋಗುವವರೆ ಲ್ಲರ ಕಣ್ಣುಗಳ ಮುಂದೆ ನಿನ್ನ ಸುತ್ತಲಿರುವ ಎಲ್ಲಾ ಜನಾಂಗಗಳ ನಿಂದೆಗೆ ಗುರಿಮಾಡಿ ನೀನು ಹಾಳಾಗುವ ಹಾಗೆ ಮಾಡುತ್ತೇನೆ.
15ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
16ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.