ಯೆಹೆಜೆಕೇಲ್ 6

ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.

Ezekiel 6:11 (UKJV) Thus says the Lord GOD; Strike with yours hand, and stamp with your foot, and say, Alas for all the evil abominations of the house of Israel! for they shall fall by the sword, by the famine, and by the pestilence.

9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.

10ನಾನೇ ಕರ್ತನೆಂದೂ ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ ನಾನು ವ್ಯರ್ಥವಾಗಿ ಹೇಳುವದಿಲ್ಲವೆಂದೂ ತಿಳಿದುಕೊಳ್ಳುವರು.

11ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.

12ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು.

13ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್‌ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿ

Kannada Bible (Old Version), Bible Society of India.