ಯೆಹೆಜೆಕೇಲ್ 6

ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್‌ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿ

Ezekiel 6:13 (UKJV) Then shall all of you know that I am the LORD, when their slain men shall be among their idols round about their altars, upon every high hill, in all the tops of the mountains, and under every green tree, and under every thick oak, the place where they did offer sweet savour to all their idols.

11ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.

12ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು.

13ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್‌ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿ

14ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.

Kannada Bible (Old Version), Bible Society of India.