ಗಲಾತ್ಯ 4

ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.

Galatians 4:22 (UKJV) For it is written, that Abraham had two sons, the one by a bondmaid, the other by a freewoman.

20ನಾನು ನಿಮ್ಮ ವಿಷಯದಲಿ ಸಂಶಯಪಡುವವನಾದದರಿಂದ ಈಗ ನಿಮ್ಮ ಜೊತೆ ಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ.

21ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.

22ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.

23ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು.

24ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್‌.

Kannada Bible (Old Version), Bible Society of India.