ಆದಿಕಾಂಡ 1

ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.

Genesis 1:25 (UKJV) And God made the beast of the earth after his kind, and cattle after their kind, and every thing that creeps upon the earth after his kind: and God saw that it was good.

23ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು.

24ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು.

25ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.

26ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.

27ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.

Kannada Bible (Old Version), Bible Society of India.