ಆದಿಕಾಂಡ 12

ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?

Genesis 12:18 (UKJV) And Pharaoh called Abram and said, What is this that you have done unto me? why did you not tell me that she was your wife?

16ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.

17ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.

18ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?

19ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.

20ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.

Kannada Bible (Old Version), Bible Society of India.