ಆದಿಕಾಂಡ 13

ಅಬ್ರಾಮನು ಕಾನಾನ್‌ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.

Genesis 13:12 (UKJV) Abram dwelled in the land of Canaan, and Lot dwelled in the cities of the plain, and pitched his tent toward Sodom.

10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.

11ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು.

12ಅಬ್ರಾಮನು ಕಾನಾನ್‌ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.

13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.

14ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.

Kannada Bible (Old Version), Bible Society of India.