2ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
3ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ
4ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
5ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.
6ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು.