ಆದಿಕಾಂಡ 14

ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.

Genesis 14:2 (UKJV) That these made war with Bera king of Sodom, and with Birsha king of Gomorrah, Shinab king of Admah, and Shemeber king of Zeboiim, and the king of Bela, which is Zoar.

1ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ,

2ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.

3ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್‌ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.

4ಅವರು ಹನ್ನೆರಡು ವರುಷ ಕೆದೊರ್ಲ ಗೋಮರನಿಗೆ ಸೇವೆಮಾಡಿ ಹದಿಮೂರನೆಯ ವರುಷ ದಲ್ಲಿ ತಿರಿಗಿ ಬಿದ್ದರು.

Kannada Bible (Old Version), Bible Society of India.