13ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
14ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
15ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ.
16ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
17ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.