1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
2ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು.
3ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--
4ಇಗೋ, ನಾನಾದರೋ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ. ನೀನು ಅನೇಕ ಜನಾಂಗಗಳ ತಂದೆ ಯಾಗಿರುವಿ.