ಆದಿಕಾಂಡ 19

ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು.

Genesis 19:23 (UKJV) The sun was risen upon the earth when Lot entered into Zoar.

21ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ.

22ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್‌ ಎಂದು ಹೆಸರಾಯಿತು.

23ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು.

24ಆಗ ಕರ್ತನು ಸೊದೋಮ್‌ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.

25ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.

Kannada Bible (Old Version), Bible Society of India.