1ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು.
2ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
3ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
4ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.