ಆದಿಕಾಂಡ 21

ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--

Genesis 21:6 (UKJV) And Sarah said, God has made me to laugh, so that all that hear will laugh with me.

4ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.

5ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು.

6ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--

7ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.

8ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.

Kannada Bible (Old Version), Bible Society of India.