ಆದಿಕಾಂಡ 23

ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.

Genesis 23:18 (UKJV) Unto Abraham for a possession in the presence of the children of Heth, before all that went in at the gate of his city.

16ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.

17ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ

18ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.

19ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್‌ ದೇಶದಲ್ಲಿ ಹೆಬ್ರೋನ್‌ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.

20ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.

Kannada Bible (Old Version), Bible Society of India.