13ಅವನು ಅತಿ ದೊಡ್ಡವನಾಗುವ ವರೆಗೆ ಕ್ರಮೇಣ ಅಭಿವೃದ್ಧಿಯಾಗುತ್ತಾ ಬಂದನು.
14ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.
15ಅವನ ತಂದೆಯಾದ ಅಬ್ರಹಾಮನ ದಿನಗಳಲ್ಲಿ ಅಬ್ರಹಾಮನ ಸೇವಕರು ಅಗಿದ ಬಾವಿಗಳನ್ನೆಲ್ಲಾ ಫಿಲಿಷ್ಟಿಯರು ಮಣ್ಣಿನಿಂದ ಮುಚ್ಚಿದರು.
16ಆಗ ಅಬೀಮೆಲೆಕನು ಇಸಾಕನಿಗೆ--ನೀನು ನಮಗಿಂತ ಬಲಿಷ್ಟನಾದಿ ಆದುದ ರಿಂದ ನಮ್ಮ ಬಳಿಯಿಂದ ಹೋಗು, ಅಂದನು.
17ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ ಅಲ್ಲಿ ವಾಸಮಾಡಿದನು.