ಆದಿಕಾಂಡ 26

ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು;

Genesis 26:30 (UKJV) And he made them a feast, and they did eat and drink.

28ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;

29ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.

30ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು;

31ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.

32ಅದೇ ದಿನದಲ್ಲಿ ಆದದ್ದೇನಂದರೆ, ಇಸಾಕನ ಸೇವಕರು ಬಂದು ತಾವು ಅಗಿದ ಬಾವಿಯಲ್ಲಿ ನೀರು ಸಿಕ್ಕಿತೆಂದು ಅವನಿಗೆ ಹೇಳಿದರು.

Kannada Bible (Old Version), Bible Society of India.