21ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
22ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
23ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.
24ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.