16ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.
17ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.
18ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
19ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;
20ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.