ಆದಿಕಾಂಡ 30

ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;

Genesis 30:19 (UKJV) And Leah conceived again, and bare Jacob the sixth son.

17ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.

18ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.

19ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;

20ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್‌ ಎಂದು ಹೆಸರಿಟ್ಟಳು.

21ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.

Kannada Bible (Old Version), Bible Society of India.