35ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.
36ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು.
37ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ
38ಮಂದೆಗಳು ನೀರು ಕುಡಿಯುವದಕ್ಕೆ ಬಂದ ಸಮಯವೇ ಅವುಗಳಿಗೆ ಸಂಗಮಕಾಲವಾಗಿತ್ತು. ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿ ದ್ದರಿಂದ
39ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.