ಆದಿಕಾಂಡ 30

ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿ ಗಳಲ್ಲಿ ಕೋಲುಗಳನ್ನಿಟ್ಟನು.

Genesis 30:41 (UKJV) And it came to pass, whenever the stronger cattle did conceive, that Jacob laid the rods before the eyes of the cattle in the gutters, that they might conceive among the rods.

39ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.

40ಯಾಕೋಬನು ಕುರಿಗಳನ್ನು ಬೇರೆ ಮಾಡಿ ಲಾಬಾನನ ಮಂದೆಯಲ್ಲಿರುವ ರೇಖೆಗಳು ಳ್ಳವುಗಳೆದುರಾಗಿಯೂ ಕಂದು ಬಣ್ಣ ಉಳ್ಳವು ಗಳಿಗೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ ಅವುಗಳನ್ನು ಬೇರೆ ಇಟ್ಟುಕೊಂಡನು.

41ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿ ಗಳಲ್ಲಿ ಕೋಲುಗಳನ್ನಿಟ್ಟನು.

42ಆದರೆ ಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನ ವಾದವುಗಳು ಲಾಬಾನನಿಗೂ ಬಲವಾದವುಗಳು ಯಾಕೋಬನಿಗೂ ಆದವು.

43ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.

Kannada Bible (Old Version), Bible Society of India.