ಆದಿಕಾಂಡ 30

ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು.

Genesis 30:9 (UKJV) When Leah saw that she had left bearing, she took Zilpah her maid, and gave her Jacob to wife.

7ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.

8ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.

9ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು.

10ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.

11ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್‌ ಎಂದು ಹೆಸರಿಟ್ಟಳು.

Kannada Bible (Old Version), Bible Society of India.