ಆದಿಕಾಂಡ 31

ಆಗ ಯಾಕೋಬನು ಎದ್ದು ತನ್ನ ಕುಮಾರರನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ

Genesis 31:17 (UKJV) Then Jacob rose up, and set his sons and his wives upon camels;

15ಅವನು ನಮ್ಮನ್ನು ಅನ್ಯರೆಂದು ಎಣಿಸಿದ್ದಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಹಣವನ್ನು ತಾನೇ ನುಂಗಿಬಿಟ್ಟನ್ನಲ್ಲಾ.

16ಆದದರಿಂದ ದೇವರು ನಮ್ಮ ತಂದೆಯಿಂದ ತಕ್ಕೊಂಡ ಐಶ್ವರ್ಯವೆಲ್ಲಾ ನಮ್ಮದು, ನಮ್ಮ ಮಕ್ಕಳದು. ಹಾಗಾದರೆ ಈಗ ದೇವರು ನಿನಗೆ ಹೇಳಿದ್ದನ್ನೆಲ್ಲಾ ಮಾಡು ಅಂದರು.

17ಆಗ ಯಾಕೋಬನು ಎದ್ದು ತನ್ನ ಕುಮಾರರನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ

18ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್‌ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್‌ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು.

19ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.

Kannada Bible (Old Version), Bible Society of India.