16ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು.
17ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
18ಯಾಕೋಬನು ಪದ್ದನ್ ಅರಾಮಿನಿಂದ ಬಂದು ಕಾನಾನ್ ದೇಶದ ಶೆಕೆಮಿನಲ್ಲಿರುವ ಸಾಲೆಮ್ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
19ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡು ಕೊಂಡನು.
20ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.