1ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು.
2ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
3ಆಗ ಯೋಸೇಫನ ಹತ್ತು ಮಂದಿ ಸಹೋದರರು ಐಗುಪ್ತದಲ್ಲಿ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಇಳಿದು ಹೋದರು.