ಆದಿಕಾಂಡ 44

ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು.

Genesis 44:9 (UKJV) With whomsoever of your servants it be found, both let him die, and we also will be my lord's bondmen.

7ಆಗ ಅವರು ಅವನಿಗೆ--ನಮ್ಮ ಒಡೆಯನು ಯಾಕೆ ಇಂಥಾ ಮಾತುಗಳನ್ನಾಡುತ್ತಾನೆ? ಈ ಪ್ರಕಾರ ಮಾಡುವದು ನಿನ್ನ ದಾಸರಿಗೆ ದೂರವಾಗಿರಲಿ.

8ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್‌ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?

9ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು.

10ಆಗ ಅವನು--ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ ಅವನು ನನಗೆ ದಾಸನಾಗಿರಲಿ; ಆದರೆ ನೀವು ನಿರಪರಾಧಿಗಳಾಗಿರುವಿರಿ ಅಂದನು.

11ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.

Kannada Bible (Old Version), Bible Society of India.