1ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು.
2ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು.
3ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್‌ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.
4ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.