8ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.
9ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
10ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬ ಮೂವರು ಕುಮಾರರು ಹುಟ್ಟಿದರು.
11ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
12ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.