8ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
9ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ.
10ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
11ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.
12ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.