ಹಬಕ್ಕೂಕು 3

ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.

Habakkuk 3:16 (UKJV) When I heard, my belly trembled; my lips quivered at the voice: rottenness entered into my bones, and I trembled in myself, that I might rest in the day of trouble: when he comes up unto the people, he will invade them with his troops.

14ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.

15ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ.

16ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.

17ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ

18ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.

Kannada Bible (Old Version), Bible Society of India.