21ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
22ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.
23ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.