13ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
14ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
15ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ;
16ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.
17ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.