ಹೆಬ್ರೆಯರು 10

ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ

Hebrews 10:21 (UKJV) And having an high priest over the house of God;

19ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.

20ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.

21ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ

22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.

23ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).

Kannada Bible (Old Version), Bible Society of India.