ಹೆಬ್ರೆಯರು 11

ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.

Hebrews 11:10 (UKJV) For he looked for a city which has foundations, whose builder and maker is God.

8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.

9ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.

10ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.

11ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.

12ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.

Kannada Bible (Old Version), Bible Society of India.