ಹೆಬ್ರೆಯರು 2

ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.

Hebrews 2:3 (UKJV) How shall we escape, if we neglect so great salvation; which at the first began to be spoken by the Lord, and was confirmed unto us by them that heard him;

1ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.

2ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ

3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.

4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.

5ನಾವು ಪ್ರಸ್ತಾಪಿಸುವ ಬರುವ ಆ ಲೋಕವನ್ನು ಆತನು ದೂತರಿಗೆ ಅಧೀನ ಮಾಡಲಿಲ್ಲವಲ್ಲಾ.

Kannada Bible (Old Version), Bible Society of India.