13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
14ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.
16ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.