6ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.
7ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ.
8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
9ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು;
10ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು.