9ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
10ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.
11ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.