3ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
4ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
5ಆತನು ಸೈನ್ಯಗಳ ಕರ್ತನಾದ ದೇವರೇ; ಆತನ ಜ್ಞಾಪಕಾ ರ್ಥವು ಕರ್ತನೇ,
6ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;
7ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.