ಹೊಶೇಯ 4

ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.

Hosea 4:16 (UKJV) For Israel slides back as a backsliding heifer: now the LORD will feed them as a lamb in a large place.

14ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.

15ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.

16ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.

17ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.

18ಅವರು ಮಿತಿವಿಾರಿ ಕುಡಿಯುತ್ತಾರೆ; ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ; ಅವರನ್ನು ಆಳುವವರು ನಾಚಿಕೆ ಯನ್ನು ಪ್ರೀತಿ ಮಾಡಿಯೇ ಮಾಡುತ್ತಾರೆ.

Kannada Bible (Old Version), Bible Society of India.